Sunday, April 20, 2025
Google search engine

Homeಆರೋಗ್ಯಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ಹೈ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ಹೈ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿದೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳನ್ನು ಹಿಡಿದು ಅವುಗಳಲ್ಲಿ ಮಾರಣಾಂತಿಕ ವೈರಸ್‌ ಇದೆಯೇ ಎಂದು ಪರಿಣಿತರು ಪರೀಕ್ಷೆ ನಡೆಸಿದ್ದರು. ಅದರಂತೆ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿತ್ತು. ಸದ್ಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್‌ ಪತ್ತೆಯಾಗಿದೆ.

ಮಾರಕ ವೈರಸ್‌ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚ ನಡೆಸಿದ್ದಾರೆ.

ಜಿಕಾ ವೈರಸ್ ಪತ್ತೆಯಾದ ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ 30 ಗರ್ಭಿಣಿಯರು ಮತ್ತು ಜ್ವರಪೀಡಿತ 7 ಮಂದಿಯ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.

RELATED ARTICLES
- Advertisment -
Google search engine

Most Popular