Monday, December 2, 2024
Google search engine

Homeಆರೋಗ್ಯಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಝೀಕಾ ವೈರಸ್ ಮತ್ತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ​​​ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್, ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು 7 ಕೇಸು

ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ. ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

RELATED ARTICLES
- Advertisment -
Google search engine

Most Popular